



ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪದ ಸಂಕಲಕರಿಯ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಉತ್ತರ ಪ್ರದೇಶ ಮೂಲದ ಟೈಲ್ಸ್ ಕೆಲಸ ಮಾಡುವ ಕಾರ್ಮಿಕರಾದ ತೌಸೀಫ್ ಮತ್ತು ತನ್ವೀರ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿನ್ನಿಗೋಳಿ ಕಡೆಯಿಂದ ಮುಂಡ್ಕೂರು ಕಡೆಗೆ ಹೋಗುತ್ತಿದ್ದ ಕಾರು ಮುಂಡ್ಕೂರಿನಿಂದ ಸುರತ್ಕಲ್ ಕಡೆ ಸಾಗುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಅತೀವೇಗವಾಗಿ ಬರುತ್ತಿದ್ದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಚರಂಡಿಗೆ ಬಿದ್ದು ಸವಾರರು ಗಾಯಗೊಂಡಿದ್ದಾರೆ.ಅಪಘಾತದ ರಭಸಕ್ಕೆ ಬೈಕ್ ಹಾಗೂ ಕಾರು ಜಖಂಗೊAಡಿವೆ. ಚಾಲಕನ ಅತಿ ವೇಗ ,ಹಾಗೂ ವಿರುದ್ಧ ದಿಕ್ಕಿಗೆ ಕಾರು ಚಲಾಯಿಸಿದರ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.