



ಕಾರ್ಕಳ: ಸಿಡಿಮದ್ದು ಪ್ರದರ್ಶನದ ವೇಳೆ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಬೆಂಕಿ ತಗುಲಿ ಸುಟ್ಟಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.18 ರ ರಾತ್ರಿ ಸಂಭವಿಸಿದೆ. ಅವಘದ ಸಂಭವಿಸಿದ ವೇಳೆಯಲ್ಲಿ ಭಕ್ತರು ಗಾಬರಿಗೊಂಡು ದಿಕ್ಕುಪಾಲಾಗಿ ಓಡುವಾಗ ಪೇಟೆಯ ಮಧ್ಯೆ ಇದ್ದ ಕೊಳಚೆ ಗುಂಡಿಗೆ ಭಕ್ತರು ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಕಿನ್ನಿಗೋಳಿ ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.