logo
WhatsApp Image 2026-04-02 at 14.46.04.jpeg
hindalco everlast.jpeg

ಕೊಲೆ ಆರೋಪಿಯಿಂದ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ: ಪೊಲೀಸರಿಂದ ಗುಂಡು ಹಾರಾಟ

ಟ್ರೆಂಡಿಂಗ್
share whatsappshare facebookshare telegram
17 Jul 2022
post image

ಕಲಬುರಗಿ: ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿಯೊಬ್ಬ ಪಿಎಸ್ಸೆ ಮೇಲೆ ಗಂಭೀರ ಹಲ್ಲೆ ನಡೆಸಿದ ಆಘಾತಕ್ಕಾರಿ ಘಟನೆ ನಡೆದಿದೆ.

ವಿಜಯಕುಮಾರ್ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್‌ಐ ಸುವರ್ಣಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಸುವರ್ಣಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಗಿರೀಶ ಕಂಬಾನೂರ ಅವರನ್ನು ಎರಡು ತಲ್ವಾರ್‌ಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎರಡು ತಂಡಗಳಲ್ಲಿ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದರು.

ತಡರಾತ್ರಿ ಆರೋಪಿ ವಿಜಯಕುಮಾರ್ ಹಳ್ಳಿ ಹಾಗೂ ಇತರರನ್ನು ಬಂಧಿಸಲಾಗಿತ್ತು. ಶಹಾಬಾದ್ ಬಳಿಯ ತೊನಸನಹಳ್ಳಿ ಗ್ರಾಮದ ಬಳಿ ತಲ್ವಾರ್ ಹಾಗೂ ಬಂದೂಕು ಎಸೆದು ಹೋಗಿದ್ದ ಜಾಗದಲ್ಲಿ ಪಂಚನಾಮೆ ನಡೆಸಲು ಆರೋಪಿಗಳನ್ನು ಕರೆದೊಯ್ಯಲಾಗಿತ್ತು.

ಬಂದೂಕು ಎಸೆದಿದ್ದ ಸ್ಥಳವನ್ನು ತೋರಿಸುವ ನಟನೆ ಮಾಡಿದ ವಿಜಯಕುಮಾರ್ ಹಳ್ಳಿ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಕ್ಷಣ ಎಚ್ಚೆತ್ತ ಸಿಪಿಐ ಪ್ರಕಾಶ್ ಯಾತನೂರ ವಿಜಯಕುಮಾರ್‌ನತ್ತಲೂ ಗುಂಡು ಹಾರಿಸಿದರು. ಎಡಗಾಲಿಗೆ ಗಾಯವಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.