logo
WhatsApp Image 2026-04-02 at 14.46.04.jpeg
hindalco everlast.jpeg

ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಹಿಂದೂ ಯುವಕನ ಹತ್ಯೆ

ಟ್ರೆಂಡಿಂಗ್
share whatsappshare facebookshare telegram
14 Jun 2023
post image

ಧರ್ಮಶಾಲಾ : ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ ಕಾರಣಕ್ಕೆ 21 ವರ್ಷದ ಯುವಕನನ್ನು ಕೊಲೆ ಮಾಡಿ ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿ ಚರಂಡಿಗೆ ಎಸೆದ ಭೀಕರ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ.

ಮನೋಹರ್ ಲಾಲ್ ಮೃತ ದುರ್ದೈವಿ. ಈತ ಮುಸ್ಲಿಂ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನುವ ಕಾರಣಕ್ಕೆ ಯುವತಿಯ ಮನೆಯ ಮೂರು ಜನರು ಸೇರಿ ಮನೋಹರ್‌ನನ್ನು ಥಳಿಸಿ ಬಳಿಕ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿ ಚರಂಡಿಗೆ ಎಸೆದು ಹೋಗಿದ್ದಾರೆ. ಜೂನ್ 6 ರಂದು ಕಾಣೆಯಾಗಿದ್ದ ಮನೋಹರ್ ಮೃತದೇಹದ ಭಾಗಗಳು ಜೂನ್ 9 ರಂದು ಚರಂಡಿಯಲ್ಲಿ ಲಭ್ಯವಾಗಿದ್ದು ಪೋಸ್ಟ್ಮಾರ್ಟಂ ಬಳಿಕ ಭೀಕರ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ.

ಘಟನೆ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಬಾಲಕಿ ಸಹೋದರ ಶಬ್ಬೀರ್ ಸೇರಿದಂತೆ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.