



ಬೆಂಗಳೂರು :
ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಕಡಿಮೆ ಆಗುತ್ತಿರುವ ನಡುವೆ ಡೆಲ್ಟಾ ರೂಪಾಂತರಿ ವೈರಸ್ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಬೆಂಗಳೂರಿನಲ್ಲಿ ಹೊಸದಾಗಿ ಮೂವರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ 7 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.
ರಾಜ್ಯದಲ್ಲಿ ಡೆಲ್ಟಾ ವೈರಸ್ ಸೋಂಕು ಕಾಣಿಸಿಕೊಂಡವರ ಪೈಕಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಸಾವು ವರದಿಯಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.