logo
WhatsApp Image 2026-04-02 at 14.46.04.jpeg
hindalco everlast.jpeg

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಟ್ರೆಂಡಿಂಗ್
share whatsappshare facebookshare telegram
28 Sept 2023
post image

ಉಡುಪಿ : ಕರ್ನಾಟಕ ಕ್ರೀಡಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಅ. 1 ಮತ್ತು 2 ರಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅ. 2 ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡಿನ ಜಿಲ್ಲಾ ಈಜುಕೊಳ ಇಲ್ಲಿ ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಎನ್ ಮಂಜುನಾಥ ಪ್ರಸಾದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎನ್ ಶಶಿಕುಮಾರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.