logo
WhatsApp Image 2026-04-02 at 14.46.04.jpeg
hindalco everlast.jpeg

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

ಟ್ರೆಂಡಿಂಗ್
share whatsappshare facebookshare telegram
7 Oct 2023
post image

ಉಡುಪಿ : ಮೈಸೂರು ದಸರಾ ಉತ್ಸವ-2023 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 15 ರಿಂದ 23 ರ ವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2023 ಅನ್ನು ಮೈಸೂರಿನ ಹಳೆಯ ಡಿ.ಸಿ. ಆಫೀಸ್ ಪಕ್ಕದ ಓವಲ್ ಗ್ರೌಂಡ್‌ನಲ್ಲಿ ಆಯೋಜಿಸಲಾಗಿದ್ದು, ಈ ಮೇಳದಲ್ಲಿ ಕನ್ನಡ ಪ್ರಕಾಶಕರು ಹಾಗೂ ಮಾರಾಟಗಾರರು ಭಾಗವಹಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದ್ದು, ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅಕ್ಟೋಬರ್ 12 ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ. ಸಂಖ್ಯೆ: 080-22484516, 22107704 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.