



ಉಡುಪಿ,: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಕರ್ನಾಟಕ ಸಂಭ್ರಮ 50 ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರಗು ನೀಡಲು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ. ಈ ಕಾರ್ಯಕ್ರಮ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ (ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ 25,000 ರೂ. ಗಳ ಬಹುಮಾನ ನಿಗದಿಪಡಿಸಲಾಗಿದ್ದು, ಲಾಂಛನ (ಲೋಗೋ)ದ ಮಾದರಿಯನ್ನು ಕಳುಹಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://www.kannadasiri.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.