


ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ ₹8 ಹೆಚ್ಚಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು. ಪರಿಷ್ಕೃತ ದರ ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ
ಹೆಚ್ಚುವರಿ ಹಣ ಯಾರಿಗೆ ಹಂಚಿಕೆ?
ಪ್ರಸ್ತಾವಿತ ₹8 ದರ ಏರಿಕೆಯಲ್ಲಿ ₹7 ಹಾಲು ಉತ್ಪಾದಕರಿಗೆ ಹಾಗೂ ₹1 ಕರ್ನಾಟಕ ಹಾಲು ಮಹಾಮಂಡಳಿಗೆ (ಕೆಎಂಎಫ್) ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ
ಹಿಂದಿನ ಸಭೆಯಲ್ಲೂ ಚರ್ಚೆ
ಕಳೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಯ ಕುರಿತು ಚರ್ಚಿಸಿ ಒಪ್ಪಿಗೆ ನೀಡಲಾಗಿತ್ತು ಆದರೆ, ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರವನ್ನು ಮುಂದೂಡಲಾಗಿತ್ತು
ಚುನಾವಣೆ ಮುಗಿದ ಬಳಿಕ ದರ ಏರಿಕೆಗೆ ಒಪ್ಪಿಗೆ ನೀಡಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಇದರಿಂದ ಹಾಲು ಖರೀದಿಸುವ ಕುಟುಂಬಗಳ ಮಾಸಿಕ ವೆಚ್ಚ ಹೆಚ್ಚಾಗುವ ಸಾಧ್ಯತೆಯಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.