logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ: ಪ್ರತಿ ಲೀಟರ್‌ ಹಾಲಿಗೆ 2 ರೂ.ಏರಿಕೆ..!

ಟ್ರೆಂಡಿಂಗ್
share whatsappshare facebookshare telegram
25 Jun 2024
post image

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 2 ರುಪಾಯಿ ಏರಿಕೆ ಮಾಡಲಾಗಿದ್ದು, ನಾಳೆಯಿಂದ ಒಂದು ಲೀಟರ್‌ ಹಾಲಿನ ದರ 44 ರೂ. ಆಗುತ್ತಿದೆ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿಗೆ 2 ರೂ.ಏರಿಕೆ ಮಾಡಲಾಗಿದೆ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೆಎಂಎಫ್‌ ಇಡೀ ರಾಷ್ಟ್ರದಲ್ಲಿ ಅತಿ ದೊಡ್ಡ ಎರಡನೇ ದೊಡ್ಡ ಹಾಲಿನ ಮಂಡಲಿಯಾಗಿದೆ. 98 ಲಕ್ಷದ 17 ಸಾವಿರ ಲೀಟರ್ ಹಾಲು ನಮ್ಮಲ್ಲಿ ಶೇಖರಣೆ ಆಗುತ್ತಿದೆ. ಒಂದು ಕೋಟಿ ಲೀಟರ್ ಹಾಲಿನ ಶೇಖರಣೆ ಮಾಡಲು ಸಿದ್ಧರಾಗಿದ್ದೇವೆ. 27 ಲಕ್ಷ ಹಾಲು ಉತ್ಪಾದಕ ರೈತರಿಂದ ನಮಗಿದು ಸಾಧ್ಯವಾಗಿದೆ. 30 ಲಕ್ಷ ಲೀಟರ್ ಹಾಲು, ಹಾಲಿನ ಪೌಡರ್‌ಗೆ ಮೀಸಲಾಗಿದೆ ಎಂದು ಭೀಮಾ ನಾಯ್ಕ್‌ ಮಾಹಿತಿ ನೀಡಿದ್ದಾರೆ. ಬೇರೆ ರಾಜ್ಯಗಳಿಗೆ ಹಾಲಿನದರ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಪ್ಯಾಕೆಟ್ ಹಾಲಿನ ಬೆಲೆ ಕಡಿಮೆ ಇದೆ ಎಂದು ಹೇಳಿದ್ದಾರೆ. ನಾಳೆಯಿಂದಲೇ ಪರಿಷೃತ ಹಾಲಿನ ದರಗಳು ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.