logo
WhatsApp Image 2026-04-02 at 14.46.04.jpeg
hindalco everlast.jpeg

ನ್ಯಾಷನಲ್ ಇ ಸ್ಕಾಲರ್‌ಶಿಪ್ ಯೋಜನೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
10 Oct 2023
post image

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್‌ಶಿಪ್ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.depwd.gov.in ಅಥವಾ www.scholarships.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

9 ಮತ್ತು 10 ನೇ ತರಗತಿ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳಿಗೆ ನವೆಂಬರ್ 30, ಪ್ರಥಮ ಪಿ.ಯು.ಸಿ.ಯಿಂದ ಸ್ನಾತಕೋತ್ತರ ಪದವಿಯವರೆಗಿನ ಪೋಸ್ಟ್ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್‌ಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.