



ಹೆಬ್ರಿ : ಎಸ್ಆರ್ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಸಂಸ್ಥೆಯ ಅಧ್ಯಕ್ಷ ಎಚ್ ನಾಗರಾಜಶೆಟ್ಟಿ ವಿದ್ಯಾರ್ಥಿಗಳು ತಯಾರಿಸಿದ ಎಲೆಕ್ಟ್ರಾನಿಕ್ಸ್ ಸ್ಕ್ರೀನ್ ಉದ್ಘಾಟಿಸಿದರು.
ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಮುಂದಿನ ಭವಿಷ್ಯದ ಬಗ್ಗೆ ಈಗಲೇ ಸ್ಪಷ್ಟ ಕಲ್ಪನೆಯನ್ನು ಹೊಂದಿರಬೇಕು. ಪ್ರೌಢಶಾಲಾ ಹಂತದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿ ಅದರತ್ತ ಚಿಂತೆ ಮಾಡಬೇಕು. ಈ ಮೂಲಕ ತನ್ನ ಭವಿಷ್ಯತ್ತಿನ ಬಗ್ಗೆ ಸ್ಪಷ್ಟ ಕಲ್ಪನೆಯನ್ನು ಹೊಂದಬೇಕು ಎಂದು ಎಸ್ ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹೆಚ್ ನಾಗರಾಜಶೆಟ್ಟಿ ಹೇಳಿದರು.
ಅವರು ಎಸ್ಆರ್ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ವಿದ್ಯಾರ್ಥಿಗಳು ತಯಾರಿಸಿದ ಎಲೆಕ್ಟ್ರಾನಿಕ್ ಸ್ಕ್ರೀನನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ಕಾಲೇಜಿನ ರಸಾಯನಶಾಸ್ತ್ರದ ಉಪನ್ಯಾಸಕ ಹರಿಪ್ರಸಾದ್ ಮಾತನಾಡಿ ವಿಜ್ಞಾನ-ತಂತ್ರಜ್ಞಾನದಲ್ಲಿ ಇವತ್ತಿಗೆ ಅನ್ವಯವಾಗುವಂತೆ ಹೊಸ ಹೊಸ ರೀತಿಯ ಅನ್ವೇಷಣೆಗಳು ಹಾಗೂ ಬೆಳವಣಿಗೆಯ ಅವಶ್ಯಕತೆಯಿದೆ. ವಿದ್ಯಾರ್ಥಿಗಳು ಹೊಸ ಚಿಂತನೆಯ ಮೂಲಕ ಕೌಶಲ್ಯಗಳಿಂದ ವಿಜ್ಞಾನ ಕ್ಷೇತ್ರಕ್ಕೆ ತಮ್ಮ ಕೊಡುಗೆಯನ್ನು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಎಸ್ಎಲ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಎಸ್ಆರ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋಪಾಲಾಚಾರ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ನಾನಾ ರೀತಿಯ ವಿಜ್ಞಾನ ಮಾದರಿ ಹಾಗೂ ಪ್ರಯೋಗಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಲಾಯಿತು.
ವಿದ್ಯಾರ್ಥಿನಿರಾದ ಪ್ರಿಯಾ ಮತ್ತು ಸಮೀಕ್ಷಾ ನಿರೂಪಿಸಿ, ಈಶನ್ಯ ಸ್ವಾಗತಿಸಿ, ಅನುರಾಧ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.