



ಮುಂಬೈ: ಭಾರತದ ನೌಕಪಡೆಗೆ ಸೇರಿದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ. ಮುಂಬೈನ ಕರಾವಳಿ ತೀರದಲ್ಲಿ ಈ ಘಟನೆ ಸಂಭವಿಸಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಿಬ್ಬಂದಿಯನ್ನು ತಕ್ಷಣ ಧಾವಿಸಿ ಬಂದ ರಕ್ಷಣಾ ತಂಡ ರಕ್ಷಿಸಿದೆ. ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಕುರಿತು ನೌಕ ಪಡೆ ಉನ್ನತ ಮಟ್ಟದ ತನಿಖೆ ಗೆ ಆದೇಶ ನೀಡಿದೆ.
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಅರುಣಾಚಲಪ್ರದೇಶದಲ್ಲಿ ನೌಕಾ ಪಡೆಯ ಹೆಲಿಕಾಪ್ಟರ್ ಪತನಗೊಂಡಿತ್ತು. ಅಂದು ಎಎಲ್ಎಚ್ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಐವರು ಮೃತಪಟ್ಟಿದ್ದರು.
ಕಾಸರಗೋಡು ಜಿಲ್ಲೆಯ ಚೆರುವರ್ತೂರಿನ ಅಧಿಕಾರಿಯೊಬ್ಬರು ಈ ದುರಂತದಲ್ಲಿ ಹುತಾತ್ಮರಾಗಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.