



ಉಡುಪಿ: ಕೊರೋನಾ ಸಂದರ್ಭದಲ್ಲಿ ಸರಕಾರದ ಸುರಕ್ಷತಾ ಕ್ರಮ ನಿಯಮಗಳನ್ನು ಉಲ್ಲಂಘಿಸಿ ಕೇವಲ ರಾಜಕೀಯ ದುರುದ್ದೇಶದಿಂದ ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಜನ ವಿರೋಧಿ ಧೋರಣೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಖಂಡಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಸಮುದಾಯ ಮಟ್ಟಕ್ಕೆ ಹರಡುತ್ತಿರುವ ಬಗ್ಗೆ ರಾಜ್ಯ ಸರಕಾರ ಸೂಕ್ತ ಮುನ್ನೆಚ್ಚರಿಕೆಯನ್ನು ನೀಡಿದೆ. ಆದರೂ ಕಾಂಗ್ರೆಸ್ ನಾಯಕರು ಸಾವಿರಾರು ಜನರನ್ನು ಸೇರಿಸಿಕೊಂಡು ಸರ್ಕಾರದ ನಿಯಮ ನಿಬಂಧನೆಗಳನ್ನು ಪಾಲಿಸದೇ ಮೇಕೆದಾಟು ಪಾದಯಾತ್ರೆ ಮಾಡುವುದರ ಮುಖಾಂತರ ಹಠಮಾರಿ ಧೋರಣೆ ಪ್ರದರ್ಶಿಸಿ ಜನರ ಆರೋಗ್ಯದಲ್ಲಿ ಚೆಲ್ಲಾಟವಾಡುವ ಕೆಲಸ ಮಾಡುತ್ತಿದೆ.
ಕಾನೂನು ಉಲ್ಲಂಘಿಸಿರುವ ಕಾಂಗ್ರೆಸ್ ನಾಯಕರ ಮೇಲೆ ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಉದ್ಯಾವರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.