



ಹೆಮ್ಮಾಡಿ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಜಿ.553, ಆಕಾಶ್ ಹೆಬ್ಬಾರ್ 552, ಕ್ಷಮಾ ಪಡಿಯಾರ್ 496, ರಿಷಿಕಾ ಮೊಂಟೆರಿಯೊ456, ಪವಿತ್ರಾ 444 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.
ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ದ್ವಿತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.