logo
WhatsApp Image 2026-04-02 at 14.46.04.jpeg
hindalco everlast.jpeg

ನೇಜಾರು ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
18 Dec 2023
post image

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಡಿ.30ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಇಂದು ಆದೇಶಿಸಿದೆ.

ಡಿ.5ರಂದು ನ್ಯಾಯಾಲಯವು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ.18ರವರೆಗೆ ವಿಸ್ತರಿಸಿದ್ದು, ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶೆ ದೀಪಾ ಅವರ ಮುಂದೆ ಹಾಜರುಪಡಿಸಲಾಯಿತು.

ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ, ಡಿ.30ಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದರು.

ಈ ಸಂದರ್ಭ ದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.