


ಕಠ್ಮಂಡು: ನೇಪಾಳ-ಚೀನಾ ಗಡಿ ಸಮೀಪ ಸಂಭವಿಸಿದ ಭೀಕರ ಪ್ರವಾಹದ ರಕ್ಷಣಾ ಕಾರ್ಯಾಚರಣೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿನ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ 3,925 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಿಬೆಟ್‌ನಲ್ಲೂ ಪ್ರವಾಹದ ಪರಿಣಾಮ 16 ಮಂದಿ ಮೃತಪಟ್ಟಿದ್ದು, 546 ಮಂದಿ ಕಾಣೆಯಾಗಿದ್ದಾರೆ. ನೇಪಾಳದಲ್ಲಿ ನಾಪತ್ತೆಯಾದವರ ಪೈಕಿ 592 ವಿದೇಶಿಯರೂ ಸೇರಿದ್ದಾರೆ. ಪ್ರವಾಹದಿಂದ ತೀವ್ರ ಹಾನಿಗೊಳಗಾದ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ 639 ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ನೇಪಾಳದ ವಿಪತ್ತು ನಿರ್ವಹಣಾ ಸಂಸ್ಥೆಯ ಪ್ರಕಾರ, 3,333 ನೇಪಾಳಿ ನಾಗರಿಕರು ಇನ್ನೂ ಪತ್ತೆಯಾಗಿಲ್ಲ. ಈ ನಡುವೆ, ಹಿಮಾಲಯದಲ್ಲಿ ಸಂಭವಿಸಿರುವ ಈ ಭೀಕರ ಪ್ರವಾಹ ಸಾಮಾನ್ಯ ನೈಸರ್ಗಿಕ ವಿಪತ್ತಲ್ಲ ಎಂದು ನೇಪಾಳ ಪ್ರಧಾನಿ ಬಾಲೇಂದ್ರ ಶಾ ಹೇಳಿದ್ದು, ಹೆಚ್ಚಿನ ಅಂತಾರಾಷ್ಟ್ರೀಯ ನೆರವು ಮತ್ತು ಕ್ರಮಕ್ಕೆ ಕರೆ ನೀಡಿದ್ದಾರೆ.
ಜಾಗತಿಕ ತಾಪಮಾನ ಏರಿಕೆಯಿಂದ ಹಿಮಾಲಯ ಪ್ರದೇಶದ ತಾಪಮಾನದಲ್ಲೂ ಬದಲಾವಣೆಯಾಗುತ್ತಿದ್ದು, ಹಿಮನದಿಗಳ ಕರಗುವಿಕೆ ಪ್ರವಾಹದ ತೀವ್ರತೆಯನ್ನು ಹೆಚ್ಚಿಸುತ್ತಿದೆ. ಇದರಿಂದ ಇಂತಹ ಅನಿರೀಕ್ಷಿತ ಪ್ರವಾಹಗಳು ಹಾಗೂ ನೈಸರ್ಗಿಕ ವಿಪತ್ತುಗಳ ಅಪಾಯ ಹೆಚ್ಚಾಗುತ್ತಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.