



ಕೋಲ್ಕತ್ತಾ: ಚಂದ್ರಯಾನ 3ರ ಯಶಸ್ಸಿನ ಹುಮ್ಮಸ್ಸಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಗೆ ಈಗ ಹೊಸ ಸವಾಲೊಂದು ಎದುರಾಗಿದೆ.
ಕಾಲೇಜು ಮತ್ತು ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ರ‌್ಯಾಗಿಂಗ್ ಹಾವಳಿ ತಡೆಯಲು ನೆರವಾಗುವಂತೆ ಪಶ್ಚಿಮ ಬಂಗಾಳ ರಾಜ್ಯಪಾಲರು ಇಸ್ರೋ ಮೊರೆ ಹೋಗಿದ್ದಾರೆ.
ರ‌್ಯಾಗಿಂಗ್ ಹಾವಳಿ ತಡೆಗೆ ಸೂಕ್ತ ತಂತ್ರಜ್ಞಾನದ ಪರಿಹಾರ ಗುರುತಿಸುವಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಇಸ್ರೋಗೆ ಮನವಿ ಮಾಡಿದ್ದಾರೆ.
ಜಾದವ್‌ಪುರ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಮೊದಲ ವರ್ಷದ ಪದವಿಪೂರ್ವ ವಿದ್ಯಾರ್ಥಿಯೊಬ್ಬರು ಆಗಸ್ಟ್ ಆರಂಭದಲ್ಲಿ ರ‌್ಯಾಗಿಂಗ್ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ, ವಿಶ್ವವಿದ್ಯಾಲಯಗಳ ಕುಲಾಧಿಪತಿ ಸಿವಿ ಆನಂದ ಬೋಸ್ ಅವರು ಇಸ್ರೋಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.