



ನವದೆಹಲಿ: ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸೋಮವಾರ ಪ್ರಕಟಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ 2021 ಅನ್ನು ಇಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸಿದೆ. 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದರು. ಅಭ್ಯರ್ಥಿಯು ಗಳಿಸಿದ ಕಟ್-ಆಫ್ ಮತ್ತು ಅಂಕಗಳ ಆಧಾರದ ಮೇಲೆ NTA ಅಖಿಲ ಭಾರತ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿತ್ತು.ಭಾರತದಲ್ಲಿ 83,075 ವೈದ್ಯಕೀಯ, 26,949 ದಂತ ವೈದ್ಯಕೀಯ, 52,720 ಆಯುಷ್ ಮತ್ತು 603 ಪಶುವೈದ್ಯಕೀಯ ಸೀಟು ಸೇರಿದಂತೆ 3 ವಿಭಾಗಳಿಗೆ ಮೂರು ಗಂಟೆಗಳ ಅವಧಿಯಲ್ಲಿ 720 ಅಂಕಗಳಿಗೆ ನಡೆಸಿದ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.