



ಉಡುಪಿ,; ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಖಾಸಗಿ ಅನುದಾನಿತ, ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಭಾಷೆ ಅಥವಾ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಪ್ರಾರಂಭಿಸಲು ಇಚ್ಛಿಸುವ ಖಾಸಗಿ ಅನುದಾನಿತ, ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ಅರ್ಜಿಗಳನ್ನು ಇಲಾಖೆಯ ವೆಬ್‌ಸೈಟ್ www.puc.karnataka.gov.in
ಇಲ್ಲಿ 2022-23 ನ್ಯೂ ಕಾಂಬಿನೇಷನ್ ಅಥವಾ ಲಾಂಗ್ವೇಜ್ ಅಂಡ್ ಆಡ್ ಸೆಕ್ಷನ್ ಅಪ್ಲಿಕೇಷನ್ ನಲ್ಲಿ ಮೇ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲು ಅವಕಾಶವಿರುವುದಿಲ್ಲ. ಈ ಕುರಿತ ಸುತ್ತೋಲೆ ಮತ್ತು ವೇಳಾಪಟ್ಟಿಯನ್ನು ಇಲಾಖಾ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.