



ಕರ್ನಾಟಕ ಸರ್ಕಾರ ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದೆ. ಸಾರಿಗೆ ನಿಗಮಗಳು ಈ ಹಿಂದೆ ಶೇ. 40 ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಡೀಸೆಲ್ ಬೆಲೆಯ ಏರಿಕೆಯನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.