logo
WhatsApp Image 2026-04-02 at 14.46.04.jpeg
hindalco everlast.jpeg

ಹೊಸ ವರ್ಷಾಚರಣೆ ಹಿನ್ನೆಲೆ: ಉಡುಪಿ ಯಲ್ಲಿ ಪೋಲಿಸ್ ಬಂದೊಬಸ್ತ್ ಹೇಗಿದೆ ? ಸಂಪೂರ್ಣ ವಿವರ ಇಲ್ಲಿದೆ ನೋಡಿ

ಟ್ರೆಂಡಿಂಗ್
share whatsappshare facebookshare telegram
31 Dec 2021
post image

ಉಡುಪಿ: ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಾಕಾಬಂಧಿ ಮಾಡಲಾಗಿದೆ. ಜಿಲ್ಲೆಯಲ್ಲಿ ಸಾರ್ವನಿಕವಾಗಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ನಗರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ತಿಳಿಸಿದ್ದಾರೆ.

ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6ಗಂಟೆಯವರೆಗೆ ನಗರದ ಪ್ರಮುಖ ನಗರ, ಜಂಕ್ಷನ್ ಗಳಲ್ಲಿ ಪೊಲೀಸ್ ಕಣ್ಗಾವಲು ಇರಲಿದೆ. ಇದಕ್ಕಾಗಿ 800 ಪೊಲೀಸರ ನಿಯೋಜನೆ, 25 ಕಡೆ ಚೆಕ್‌ಪೋಸ್ಟ್ ಹಾಗೂ 46 ಕಡೆ ಪಿಕೆಟಿಂಗ್ ಕೇಂದ್ರಗಳನ್ನು ತೆರೆಯಲಾಗಿದೆ. 70 ಅಧಿಕಾರಿಗಳು, 5 ಡಿಆರ್ ಪೊಲೀಸ್ ತಂಡ, 1 ಕ್ಷಿಪ್ರ ಕಾರ್ಯಾಚರಣಾ ಪಡೆ, 3 ಇಂಟರ್‌ಸೆಪ್ಟರ್ ಸಹಿತ 800 ಮಂದಿ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.