



ಬಂಟ್ವಾಳ: ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದ ನವ ವಿವಾಹಿತೆಯೊಬ್ಬರು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತಪಟ್ಟ ಮಹಿಳೆ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆ ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಅವರ ಜೊತೆ ಪ್ರೇಮ ವಿವಾಹವಾಗಿದ್ದರು. ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದ್ದು, ಪ್ರೀತಿ ಮಾಡಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಮಾನಸಿಕ ಕಿರುಕುಳ ಕೊಡುತ್ತಿದ್ದರು. ಈ ಕಾರಣಕ್ಕಾಗಿ ನೌಸೀನ್ ಉಳ್ಳಾಲದ ಗಂಡನ ಮನೆಯಿಂದ ಸಜೀಪ ತಾಯಿ ಮನೆಗೆ ಬಂದಿದ್ದಳು. ಮಾನಸಿಕವಾಗಿ ನೊಂದಿದ್ದ ನೌಸೀನ್ ಅ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.