



ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಭೀತಿ ಹಿನ್ನಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಚಾಮರಾಜನಗರ, ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ ೧೦ರವರೆಗೆ ಕಣ್ಗಾವಲು ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಅವರು ನಾಲ್ಕು ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಯಾವುದೇ ಶಂಕಿತ ನಿಫಾ ಪ್ರಕರಣಗಳು ಪತ್ತೆಯಾಗಿಲ್ಲ, ಸರ್ಕಾರವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.