



ಕಾರ್ಕಳ;
ಕಾರ್ಕಳ: ಇಸ್ಪೀಟು ಆಟದಲ್ಲಿ ನಿರತರಾಗಿದ್ದ ನಾಲ್ಕು ಮಂದಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ನಿಟ್ಟೆ ಗ್ರಾಮದ ಕೆಮ್ಮಣ್ಣು ಡ್ಯಾಮ್‌ನ ಬಳಿಯ ಪಾಳು ಬಿದ್ದ ಹಳೆಯ ಕಟ್ಟಡದಲ್ಲಿ ಇಸ್ಪೀಟು ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ. ನಿಟ್ಟೆ ನಿವಾಸಿಗಳಾದ ಪ್ರಥಮ್ ಶೆಟ್ಟಿ,ಸಂದೀಪ,ಗುರು ಪ್ರಸಾದ,ರಾಜೇಶ್ ಪೂಜಾರಿ ಬಂಧಿತ ಆರೋಪಿಗಳು. ದಾಳಿ ವೇಳೆ ಇಸ್ಪೀಟು ಜುಗಾರಿ ಆಟಕ್ಕೆ ಬಳಸಿದ 1360 ರೂ. ನಗದು, ಇಸ್ಪೀಟ್ ಎಲೆ ಸಹಿತ ಇತರೆ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.