logo
WhatsApp Image 2026-04-02 at 14.46.04.jpeg
hindalco everlast.jpeg

ನಿಟ್ಟೆ : ಮನೆಯ ಬಾಲ್ಕನಿಯಿಂದ ಬಿದ್ದು ಮಹಿಳೆ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
27 Nov 2021
post image

ಕಾರ್ಕಳ: ಮನೆಯ ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ನಿಟ್ಟೆ ಗ್ರಾಮದ ಕಮಲ ಪ್ರಿಯಾ ಬಿ.(48) ಎಂದು ಗುರುತಿಸಲಾಗಿದೆ. ಇವರು ಕಳೆದ 10 ವರ್ಷಗಳಿಂದ ಕಾರ್ಕಳ ನಿಟ್ಟೆ ಗ್ರಾಮದ ನಿಟ್ಟೆ ಕಾಲೇಜಿನ ವಸತಿಗೃಹದ 5ನೇ ಮಹಡಿಯಲ್ಲಿ ಪತಿಯೊಂದಿಗೆ ವಾಸವಾಗಿದ್ದರು.ನ. 24ರಂದು ಸಂಜೆ 7.30ರ ಸುಮಾರಿಗೆ ಕಮಲ ಬಾಲ್ಕನಿಯಲ್ಲಿ ಸ್ಟೂಲ್ ನ ಮೇಲೆ ನಿಂತು ಬಟ್ಟೆ ಒಣಗಿಸುತ್ತಿದ್ದರು. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.