logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ `ಪಬ್ಲಿಕ್ ಪರೀಕ್ಷೆ' ಇಲ್ಲಾ: ಉಲ್ಟಾ ಹೊಡೆದ ಶಿಕ್ಷಣ ಇಲಾಖೆ

ಟ್ರೆಂಡಿಂಗ್
share whatsappshare facebookshare telegram
15 Dec 2022
post image

ಬೆಂಗಳೂರು: ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಪೂರಕ ಪರೀಕ್ಷೆ ಇರುವುದಿಲ್ಲ. ಐದು, ಎಂಟನೇ ತರಗತಿಯ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆಯ ಅಂಕ ಪಡೆದವರಿಗೆ ಜೂನ್ ಮತ್ತು ಜುಲೈನಲ್ಲಿ ಪರಿಹಾರ ಬೋಧನೆ ನಡೆಸಿ ಶಾಲಾ ಹಂತದಲ್ಲಿ ಎರಡು ಪೂರಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು . ಮಕ್ಕಳ ಪೋಷಕರಿಂದ ಲೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ಆದೇಶ ಹಿಂಪಡೆದಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು .ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.