



ಶ್ರೀಲಂಕಾ: ಭಾರತಕ್ಕೆ ಹಾನಿ ಮಾಡುವ ಯಾವುದೇ ಯೋಜನೆಯ ಕೇಂದ್ರವಾಗಲು ಯಾವುದೇ ದೇಶಕ್ಕೆ ಅವಕಾಶ ನೀಡುವುದಿಲ್ಲ ಶ್ರೀಲಂಕಾ ಸ್ಪಷ್ಟಪಡಿಸಿದೆ.
ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳಿಗೆ ಹಾನಿಕಾರಕವಾದ ಯಾವುದಕ್ಕೂ ದ್ವೀಪ ರಾಷ್ಟ್ರವನ್ನು ಕೇಂದ್ರವಾಗಿಸಲು ಶ್ರೀಲಂಕಾ ಯಾವುದೇ ದೇಶಕ್ಕೂ ಅನುಮತಿ ನೀಡುವುದಿಲ್ಲ ಎಂದು ಶ್ರೀಲಂಕಾದ ವಿದೇಶಾಂಗ ಸಚಿವ ಎಂಯುಎಂ ಅಲಿ ಸಬ್ರಿ ಹೇಳಿದ್ದಾರೆ.
ಕಳೆದ ವರ್ಷ ಚೀನಾದ ‘ಪತ್ತೇದಾರಿ’ ನೌಕೆಯು ಹಂಬನ್‌ತೋಟ ಬಂದರಿಗೆ ಭೇಟಿ ನೀಡಿದ್ದಕ್ಕಾಗಿ ದ್ವಿಪಕ್ಷೀಯ ಸಂಬಂಧಗಳಿಗೆ ಹೊಡೆತ ಬೀಳುವ ಕುರಿತು ಸಂದರ್ಶನವೊಂದರಲ್ಲಿ ಕೇಳಲಾದ ಪ್ರಶ್ನೆಗೆ ಸಬ್ರಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಭಾರೀ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಶ್ರೀಲಂಕಾಕ್ಕೆ ಸಹಾಯ ಮಾಡುವಲ್ಲಿ ಭಾರತದ ಪಾತ್ರವನ್ನು ಶ್ಲಾಘಿಸಿದ ಸಬ್ರಿ, ರಾಷ್ಟ್ರೀಯ ಕರೆನ್ಸಿಗಳಲ್ಲಿ ಪಾವತಿಗಳನ್ನು ಇತ್ಯರ್ಥಪಡಿಸುವ ಪ್ರಸ್ತಾಪವನ್ನು ಒಳಗೊಂಡಂತೆ ಆರ್ಥಿಕ ಚೇತರಿಕೆಯನ್ನು ಹೆಚ್ಚಿಸಲು ಶ್ರೀಲಂಕಾ ಸರ್ಕಾರ ನವದೆಹಲಿಯೊಂದಿಗೆ ಹೆಚ್ಚು ನಿಕಟವಾಗಿ ಕೆಲಸ ಮಾಡುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.
ಕಳೆದ ವರ್ಷಗಳಿಗೆ ಹೋಲಿಸಿದರೆ ಶ್ರೀಲಂಕಾದಲ್ಲಿನ ತಮಿಳರ ಸ್ಥಿತಿ ಸಾಕಷ್ಟು ಸುಧಾರಿಸಿದೆ ಎಂದು ಸಬ್ರಿ ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.