



ಬೆಂಗಳೂರು, ಫೆಬ್ರವರಿ 28: ವಾಟ್ಸಾಪ್ ಮೂಲಕ ಪೊಲೀಸರು ನೋಟಿಸ್ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಕರ್ನಾಟಕ ಹೈಕೋರ್ಟ್ (High Court) ಆದೇಶ ಹೊರಡಿಸಿದೆ. ಆ ಮೂಲಕ ತಮಿಳುನಾಡಿನ ಪವನ್ ಕುಮಾರ್ ಎಂಬಾತನಿಗೆ ನೀಡಿದ್ದ ವಾಟ್ಸಾಪ್ ನೋಟಿಸ್ ರದ್ದುಪಡಿಸಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರ ಪೀಠ ಶುಕ್ರವಾರ ಆದೇಶ ಹೊರಡಿಸಿದೆ. ಇಂತಹ ಅಭ್ಯಾಸವು ಕಾನೂನಿನಲ್ಲಿ ಅನುಮತಿಸಲಾಗುವುದಿಲ್ಲ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ನೋಟಿಸ್ ನೀಡುವುದು ಶಾಸನಬದ್ಧ ಅವಶ್ಯಕತೆಗಳನ್ನು ಉಲ್ಲಂಘಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆಡುಗೋಡಿ ಪೊಲೀಸರು ಬಿಎನ್‌ಎಸ್‌ಎಸ್, 2023 ರ ಕಲಂ 35 (3) ರ ಅಡಿಯಲ್ಲಿ ನೀಡಿದ ನೋಟಿಸ್‌ನಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ತಮಿಳುನಾಡಿನ ಪವನ್ ಕುಮಾರ್ ಎಂಬಾತನಿಗೆ ಆಡುಗೋಡಿ ಪೊಲೀಸರು ವಾಟ್ಸಾಪ್ ಮೂಲಕ ಐಟಿ ಕಾಯ್ದೆ ಸೆ.66(C), 66(D)ರಡಿ ನೋಟಿಸ್ ನೀಡಿದ್ದರು. ಆದರೆ ವಾಟ್ಸಾಪ್ ಮೂಲಕ ಪೊಲೀಸರು ನೋಟಿಸ್ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಹೈಕೋರ್ಟ್ ಆದೇಶ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.