



ಉಡುಪಿ:
ಕಾಂಗ್ರೆಸ್ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ತಡವಾಗಿ ಎಚ್ಚೆತ್ತುಕೊಂಡಿದ್ದು, ಗಾಂಧಿ ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರುವುದಕ್ಕೆ ಆಗಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿದ್ದರೂ, ಪಕ್ಷದ ಆಡಳಿತ ಮತ್ತು ನಿರ್ವಹಣೆ ಗಾಂಧಿ ಕುಟುಂಬದಿಂದಲೇ ನಡೆಯುತ್ತದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಲೇವಡಿ ಮಾಡಿದರು ಉಡುಪಿ ಪತ್ರಿಕಾಭವನದಲ್ಲಿ ಶನಿವಾರ ನಡೆದ ಸುದ್ದಿಗಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಮುಖಂಡ ಶಶಿ ತರೂರ್ ಎಐಸಿಸಿ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. 75 ವರ್ಷಗಳಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ನಲ್ಲಿ ಮತದಾರರ ಪಟ್ಟಿ ಸಿದ್ದವಾಗಿದೆ ಎಂದರು. ಬಿಜೆಪಿಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಬೂತ್ ಮಟ್ಟದಿಂದ ರಾಷ್ಟ್ರೀಯ ಅಧ್ಯಕ್ಷರವರೆಗೂ ಬದಲಾವಣೆ ಮಾಡಲಾಗುತ್ತದೆ. ಬಿಜೆಪಿಯಲ್ಲಿಯೂ ನಾಮಪತ್ರ ಸಲ್ಲಿಸಿಯೇ ಅಧ್ಯಕ್ಷರ ಆಯ್ಕೆಯಾಗುತ್ತದೆ. ಪಕ್ಷದ ಆಂತರಿಕ ವ್ಯವಸ್ಥೆಯಲ್ಲಿಯೂ 33% ಮಹಿಳೆಯರಿಗೆ ಮೀಸಲಾತಿ ಇದೆ ಎಂದು ಹೇಳಿದರು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ನೀಡಿರುವ ಭಗವದ್ಗೀತೆಯಲ್ಲಿ ಜಿಹಾದ್ ಭೋದಿಸಲಾಗಿದೆ ಎಂಬ ಹೇಳಿಕೆಯನ್ನು ಖಂಡಿಸಿದ ಸಚಿವರು,. ಈ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುತ್ತದೆಯೇ..? ತನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಶಿವರಾಜ್ ಪಾಟೀಲ್ ಮೂಲಕ ಹೇಳಿಸಿದೆಯೇ..? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.