



ಹಾಸನ: ಯಾವುದೇ ಬಿಪಿಎಲ್ ಪಡಿತರ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಕಾರು ಹೊಂದಿದವರಿಗೂ ಪರಿಶೀಲನೆ ನಡೆಸಿ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಇ-ಕೆವೈಸಿ ಮಾಡದ ಪಡಿತರ ಚೀಟಿಗಳ ಸಂಖ್ಯೆ ಗಮನಿಸಿ ಇ-ಕೆವೈಸಿ ಮಾಡಿಕೊಳ್ಳಲು ಆಗಸ್ಟ್ 31ರ ನಂತರವೂ ಅವಕಾಶ ಕಲ್ಪಿಸಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದಿದ್ದ ಮೂರು ಲಕ್ಷ ಪಡಿತರ ಚೀಟಿ ಅರ್ಜಿಗಳ ಪರಿಶೀಲನೆ ಕಾರ್ಯ ನಡೆದಿದೆ ಎಂದು ಅವರು ತಿಳಿಸಿದರು.
ಅನ್ನಭಾಗ್ಯ ಅಕ್ಕಿ ಖರೀದಿಗೆ ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳ ಜತೆ ಮಾತುಕತೆ ನಡೆದಿದ್ದು, ದರ ವಿಚಾರವಾಗಿ ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಲಾಗುವುದು ಎಂದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.