



ಹೊಸದಿಲ್ಲಿ: ಭಾರತದಿಂದ ಈರುಳ್ಳಿ ರಫ್ತಿಗೆ ಯಾವುದೇ ನಿರ್ಬಂಧವನ್ನು ವಿಧಿಸಲಾಗಿಲ್ಲ. 2022ರ ಎಪ್ರಿಲ್‌ನಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ 523.8 ಶತಕೋಟಿ ಡಾಲರ್ ಮೌಲ್ಯದ ಈರುಳ್ಳಿಯನ್ನು ರಫ್ತು ಮಾಡಲಾಗಿದೆ ಎಂದು ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ.
ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಅವರು ಕೇಂದ್ರ ಸರಕಾರ ಈರುಳ್ಳಿ ಮೇಲಿನ ರಫ್ತು ನಿಷೇಧ ಹಿಂಪಡೆಯಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್ ಪ್ರತಿಕ್ರಿಯಿಸಿ, ಜನರನ್ನು ಹಾದಿ ತಪ್ಪಿಸಬೇಡಿ. ದೇಶದಲ್ಲಿ ಈರುಳ್ಳಿ ರಫ್ತಿಗೆ ನಿರ್ಬಂಧವಿಲ್ಲ, ಈರುಳ್ಳಿ ಬೀಜಗಳಿಗೆ ಮಾತ್ರ ರಫ್ತು ನಿರ್ಬಂಧವಿದೆ. 2022ರಲ್ಲಿ ರಫ್ತು ಪ್ರಮಾಣ ಕೂಡ ಶೇ.50ರಷ್ಟು ಹೆಚ್ಚಾಗಿದೆ ಎಂದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.