



ಉಡುಪಿ, : ಪಿ.ಎಂ ಕಿಸಾನ್ ಯೋಜನೆಯಡಿ ಇ-ಕೆವೈಸಿ ಮಾಡಿಸಲು ನಾಳೆ (ಅಗಸ್ಟ್ 15) ಕೊನೆಯ ದಿನ ವಾಗಿದೆ. ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆಯುತ್ತಿರುವ ಜಿಲ್ಲೆಯ ರೈತರು ಆಗಸ್ಟ್ 15 ರ ಒಳಗೆ ಸಮೀಪದ ಕಾಮನ್ ಸರ್ವೀಸ್ ಸೆಂಟರ್‌ಗಳಲ್ಲಿ ಅಥವಾ ಸ್ಮಾರ್ಟ್ಪೋನ್ ಬಳಸುತ್ತಿರುವ ರೈತರು ಪಿ.ಎಂ ಕಿಸಾನ್ ವೆಬ್ ಪೋರ್ಟಲ್ www.pmkisan.gov.in ತಂತ್ರಾಂಶದ ಮೂಲಕ ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿಯನ್ನು ಮಾಡಿಕೊಳ್ಳಬಹುದಾಗಿದೆ. ಆಗಸ್ಟ್ 15 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ರೈತರಿಗೆ ಪಿ.ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸೌಲಭ್ಯ ಸಿಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.