logo
WhatsApp Image 2026-04-02 at 14.46.04.jpeg
hindalco everlast.jpeg

ಸಾಕು ನಾಯಿಗಳನ್ನು ಬೀದಿಗೆ ಬಿಡದಂತೆ ಸೂಚನೆ

ಟ್ರೆಂಡಿಂಗ್
share whatsappshare facebookshare telegram
28 Oct 2023
post image

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಸಾಕು ನಾಯಿಗಳನ್ನು ಹೊರಗೆ ಬಿಡದೇ ಮನೆಯಲ್ಲಿ ಕಟ್ಟಿ ಹಾಕಿ ಸಾಕಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ಥಳದಲ್ಲಿ ನಾಯಿಗಳನ್ನು ಬಿಡದೇ ಸಂರಕ್ಷಣೆ ಮಾಡುವುದು ಕರ್ತವ್ಯವಾಗಿದೆ.

ಸಾಕು ನಾಯಿ ಮರಿಗಳನ್ನು ರಸ್ತೆಯಲ್ಲಿ ಬಿಡುವುದು ಕಂಡುಬಂದಿದ್ದು, ಸಾಕುನಾಯಿಗಳಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅವುಗಳಿಗೆ ಕಾಲಕಾಲಕ್ಕೆ ವ್ಯಾಕ್ಸಿನ್ ಹಾಕಿಸುವುದು ಮಾಲೀಕರ ಜವಾಬ್ದಾರಿಯಾಗಿರುತ್ತದೆ. ಇದನ್ನು ನಿರ್ಲಕ್ಷö್ಯ ಮಾಡಿ, ಸಾಕು ನಾಯಿಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಮನೆಯ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.