



ಬೆಂಗಳೂರು: ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯದ ಎಲ್ಲ ವಿ.ವಿ.ಗಳಿಗೂ ನಿರ್ದೇಶಿಸಬೇಕು' ಎಂದು ಅವರು ಕೋರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.