



ಹೆಬ್ರಿ : ವಿದ್ಯಾರ್ಥಿಗಳ ಬದುಕಿನಲ್ಲಿ ಕೇವಲ ಅಂಕಗಳು ಮಾತ್ರ ಗಣನೆಗೆ ಬರುವುದಿಲ್ಲ. ವಿದ್ಯಾರ್ಥಿಗಳ ಜೀವನದಲ್ಲಿ ಎನ್ ಎಸ್ ಎಸ್ ಶಿಬಿರವು ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದ್ದು ಪರಿಣಾಮಕಾರಿಯಾಗಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕ್ಯಾಂಪ್ಕೋ ನಿರ್ದೇಶಕ ದಯಾನಂದ ಹೆಗ್ಡೆ ಹೇಳಿದರು. ಅವರು ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಕಡ್ತಲದಲ್ಲಿ ಶುಕ್ರವಾರ ಆರಂಭಗೊಂಡ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಸತೀಶ್ ಪೈ.ಕೆ.ವಿ. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಹರೀಶ್, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿ ಬಿ.ಆರ್. ಮಧುಚಂದ್ರ, ಕಾಲೇಜಿನ ಪ್ರಾಧ್ಯಾಪಕರಾದ ದತ್ತಕುಮಾರ, ಕೋಕಿಲ, ಹಾಜಿ ಬಾಬಾ ಹಾಲ್ವಿ, ಶಾಂತಮ್ಮ, ರಮ್ಯಶ್ರೀ, ಸುನೀತ, ಸುಮಲತಾ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.