



ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 288 ಕ್ಕೆ ಏರಿಕೆಯಾಗಿದೆ ಎಂದು ಒಡಿಶಾ ಸರ್ಕಾರ ಮಂಗಳವಾರ ತಿಳಿಸಿದೆ. ಹಲವಾರು ಮೃತದೇಹಗಳನ್ನು ಪರಿಶೀಲಿಸಿ ಅವರ ಸಂಬಂಧಿಕರಿಗೆ ಹಸ್ತಾಂತರಿಸಿದ ನಂತರ ಇದೀಗ ಸಾವಿನ ಸಂಖ್ಯೆ ಹೆಚ್ಚಿರುವುದು ತಿಳಿದುಬಂದಿದೆ. ಹೌರಾ-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡ ಸರಣಿ ಅಪಘಾತದಲ್ಲಿ ಸಾವನ್ನಪ್ಪಿದ 288 ಮಂದಿಯ ಪೈಕಿ 205 ಮೃತದೇಹಗಳನ್ನು ಇದುವರೆಗೆ ಗುರುತಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ತಿಳಿಸಿದ್ದಾರೆ.
83 ಅಪರಿಚಿತ ಶವಗಳನ್ನು ಗುರುತಿಸಲು ಬಾಕಿ ಇದ್ದು, ಭುವನೇಶ್ವರದ ಏಮ್ಸ್ ಮತ್ತು ಇತರ ಆಸ್ಪತ್ರೆಗಳಲ್ಲಿ ಇರಿಸಲಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಸಹಾಯವಾಣಿ ಸಂಖ್ಯೆಗಳಲ್ಲಿ ನಾವು ಅನೇಕ ಪ್ರಶ್ನೆಗಳನ್ನು ಸ್ವೀಕರಿಸಿದ್ದೇವೆ. ಎಲ್ಲಾ ದೇಹಗಳನ್ನು ಗುರುತಿಸಲಾಗುವುದು. ಈ ಬಗ್ಗೆ ನಾವು ಆಶಾವಾದಿಗಳಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಇಂದಿನಿಂದ(ಬುಧವಾರ) ಕೋರಮಂಡಲ್ ಎಕ್ಸ್‌ಪ್ರೆಸ್ ಸಂಚಾರ ಪುನರಾರಂಭ ರೈಲು ದುರಂತದ ಐದು ದಿನಗಳ ನಂತರ ಕೋರಮಂಡಲ್ ಎಕ್ಸ್‌ಪ್ರೆಸ್ ತನ್ನ ಪ್ರಯಾಣವನ್ನು ಜೂನ್ 7 ರಂದು ಪುನರಾರಂಭಿಸಲಿದೆ. ರೈಲು ಇಂದು(ಬುಧವಾರ) ಮಧ್ಯಾಹ್ನ 3:30 ಕ್ಕೆ ಶಾಲಿಮಾರ್‌ನಿಂದ ಚೆನ್ನೈಗೆ ಹೊರಡುವ ಸಾಧ್ಯತೆಯಿದೆ. ಈ ಮಧ್ಯೆ, ರೈಲು ದುರಂತದ ಸ್ಥಳಕ್ಕೆ ಭೇಟಿ ನೀಡಿರುವ ಸಿಬಿಐ, ಈಗಾಗಲೇ ತನಿಖಾ ಪ್ರಕ್ರಿಯೆ ಆರಂಭಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.