



ಬೆಂಗಳೂರು: ಪೋಷಕರ ಭಯದಿಂದ ಮನೆ ಬಿಟ್ಟಿದ್ದ ಮಕ್ಕಳು ಖಾಸಗಿ ಬಸ್ ಮೂಲಕ ಮಂಗಳೂರಿಗೆ ಆಗಮಿಸಿದ್ದು, ಮಂಗಳೂರಿನ ರಿಕ್ಷಾ ಚಾಲಕರು ಮಕ್ಕಳ ಬಗ್ಗೆ ಸಂಶಯ ದಿಂದ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್, ನಾಲ್ವರು ಮಕ್ಕಳು ಒಂದೇ ಲೇಔಟ್ ನ ನಿವಾಸಿಗಳು. ಎಲ್ಲರೂ ಒಟ್ಟಿಗೆ ಆಡಲು ಹೋಗುತ್ತಿದ್ದರು.ಪ್ರಯಾಣಕ್ಕೆ ಎಲ್ಲರೂ ಮನೆಯಿಂದ ಹಣ ತಂದಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಮೂಲಕ ಬಂದಿದ್ದಾರೆ. ತಮ್ಮ ಗುರುತನ್ನು ಯಾರೂ ಪತ್ತೆ ಹಚ್ಚಬಾರದೆಂದು ಸಿಮ್ ಕಾರ್ಡ್, ಮೈ ಮೇಲಿದ್ದ ಚಿನ್ನಾಭರಣವನ್ನು ಮಂಗಳೂರಿನ ಖಾಸಗಿ ಬಸ್ ನಿಲ್ದಾಣ ದ ಡಸ್ಟ್ ಬಿನ್ ಗೆ ಎಸೆದಿದ್ದಾರೆ. ಪೊಲೀಸರು ಈ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಕ್ಕಳು ಸಿಕ್ಕಿರುವ ಬಗ್ಗೆ ಈಗಾಗಲೇ ಬೆಂಗಳೂರು ಡಿಸಿಪಿಗೆ ಮಾಹಿತಿ ನೀಡಿದ್ದೇವೆ. ಬೆಂಗಳೂರಿನಿಂದ ಹೆತ್ತವರು ಮಂಗಳೂರಿಗೆ ಬರುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.