



ನವದೆಹಲಿ:ದಕ್ಷಿಣ ಆಫ್ರಿಕಾದಲ್ಲಿ ಕಂಡು ಬಂದ ಹೊಸ ರೂಪಾಂತರ ಓಮಿಕ್ರಾನ್ ಡೆಲ್ಟಾಕ್ಕಿಂತ ಮೂರು ಪಟ್ಟು ಸಾಂಕ್ರಾಮಿಕವಾಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಿಂದಾಗಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.ರಾಜ್ಯಗಳಿಗೆ ತಿಳಿಸಿರುವ ಕೇಂದ್ರ ಸರ್ಕಾರವು, ಹಲವಾರು ಅಗತ್ಯ ಕ್ರಮಗಳನ್ನು ಪಟ್ಟಿ ಮಾಡಿ ರಾಜ್ಯಗಳಿಗೆ ನೀಡಿದೆ. ಅಗತ್ಯವಿದ್ದರೆ ನೈಟ್ ಕರ್ಫ್ಯೂ ಅನ್ನು ಜಾರಿ ಮಾಡಿ ಎಂದು ಕೂಡಾ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹೇಳಿದೆ.
ಆರೋಗ್ಯ ಸಚಿವಾಲಯದ ಪತ್ರದಲ್ಲಿ, ಸ್ಥಳೀಯ ಪರಿಸ್ಥಿತಿಗಳನ್ನು ಆಧರಿಸಿಕೊಂಡು ಕ್ರಮವನ್ನು ಕೈಗೊಳ್ಳುಬೇಕು ಎಂದು ಕೂಡಾ ಉಲ್ಲೇಖ ಮಾಡಲಾಗಿದೆ. ಹಾಗೆಯೇ "ಥ್ರೆಶೋಲ್ಡ್ ಮಿತಿಗಳು" ಎಂದು ಕರೆಯಲ್ಪಡುವ ಮಾರ್ಗಸೂಚಿಗಳನ್ನು ಕೂಡಾ ಕೇಂದ್ರ ಸರ್ಕಾರ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.