



ಕಾರ್ಕಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಪಾದಚಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯ ದುರ್ಗಾ ಆರ್ಟ್ಸ ಬಳಿ ನಡೆದಿದೆ.ಕರಿಯಶೆಟ್ಟಿ (೬೯) ಮೃತಪಟ್ಟವರು. ಕರಿಯಶೆಟ್ಟಿಯವರು ಜೋಡುರಸ್ತೆ ಕಡೆಯಿಂದ ಹಿರ್ಗಾನ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಓಮ್ನಿಯಲ್ಲಿ ಬರುತಿದ್ದ ಚಾಲಕ ಅನಿಲ್ ಎಂಬಾತ ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಯವರಿಗೆ ಡಿಕ್ಕಿ ಹೊಡೆದಿದ್ದಾನೆ . ಕರಿಯಶೆಟಿ ್ಟತೀವ್ರ ತರಹದ ತಲೆಯ ಹಿಂಬದಿ ಮತ್ತು ಸೊಂಟಕ್ಕೆ ತೀವ್ರ ತರಹದ ಪೆಟ್ಟಾದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.