



ಕಾರ್ಕಳ : ಕರ್ನಾಟಕ ಸರಕಾರದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಜೂನ್1 ರಂದು ಕಾರ್ಕಳದ ಎಣ್ಣೆಹೊಳೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಲಿದ್ದಾರೆ. ಬೆಳಿಗ್ಗೆ ೦೯.೩೦ ಕ್ಕೆ ರೂ. ೧೦೮ ಕೋಟಿ ವೆಚ್ಚದ ಅಜೆಕಾರು ಸ್ವರ್ಣ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಏತ ನೀರಾವರಿ ಯೋಜನೆ ಉದ್ಘಾಟನೆ, ರೂ. ೧೦ ಕೋಟಿ ವೆಚ್ಚದ ಹೆಬ್ರಿ ತಾಲೂಕು ಆಡಳಿತ ಸೌಧ ಉದ್ಘಾಟನೆ ಮತ್ತು ರೂ. ೧.೫ ಕೋಟಿ ವೆಚ್ಚದ ಹೆಬ್ರಿ ನೂತನ ಬಸ್ ನಿಲ್ದಾಣ ಶಂಕು ಸ್ಥಾಪನೆ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವರಾದ ಆರ್. ಅಶೋಕ್ ನೆರವೇರಿಸಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಿವೃದ್ಧಿಯ ರೂವಾರಿ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಇಂಧನ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ರವರು ವಹಿಸಲಿದ್ದಾರೆ. ಉಡುಪಿ ಸಂಸದರಾದ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಉ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉಪಸ್ಥಿತರಿರುವರು. ವಿಶೇಷ ಅಹ್ವಾನಿತರಾಗಿ ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಕಾರಜೋಳ, ಸಚಿವರಾದ ಡಾ. ಅಶ್ವಥ್ ನಾರಾಯಣ, ಶ್ರೀ ವಿ. ಸೋಮಣ್ಣ, ಶ್ರೀ ಎನ್. ಮುನಿರತ್ನ ಭಾಗವಹಿಸಲಿದ್ದಾರೆ. ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಮ್ ಸುಕುಮಾರ ಶೆಟ್ಟಿ, ಸಂಸದರಾದ ಬಿವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್.ಎಲ್ ಬೋಜೆ ಗೌಡ, ಮಂಜುನಾಥ ಪೂಜಾರಿ, ತೇಜಶ್ವಿನಿ ಗೌಡ, ಪ್ರಮುಖರಾದ ಜಯಪ್ರಕಾಶ್ ಹೆಗ್ಡೆ, ಮಟ್ಟಾರು ರತ್ನಾಕರ ಹೆಗ್ಡೆ, ಮಣಿರಾಜ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುಮಾರು ೧೦ ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು ಮುಖ್ಯಮಂತ್ರಿಯವರ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸುವಲ್ಲಿ ಕಾರ್ಯಕರ್ತರು ಸತತ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ವಕ್ತಾರ ಕೆ.ಎಸ್ ಹರೀಶ್ ಶೆಣೈ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.