



ಉಡುಪಿ: ಬೈಲೂರು ಶ್ರೀ ಮಹಿಷಮರ್ದಿನಿ ದೇಗುಲಕ್ಕೆ ಸಂಬಂಧಪಟ್ಟ ಶ್ರೀ ಧೂಮಾವತಿ ದೈವಸ್ಥಾನವನ್ನು ಸುಮಾರು 1.60 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ.
ಇನ್ನೂ 1 ಕೋ.ರೂ. ಕಾಮಗಾರಿಯನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು. ದೈವದ ಎಲ್ಲ ಮೂರ್ತಿಗಳು, ಆಯುಧಗಳನ್ನು ಬೆಳ್ಳಿಯಿಂದಲೇ ಮಾಡಲಾಗಿದೆ. ಮಾ.18ರ ವರೆಗೆ ಮೂಲ ಮಹಿಷಂತಾಯ, ಧೂಮಾವತಿ, ಬಂಟ, ಪಂಜುರ್ಲಿ ದೈವಗಳ ನೂತನ ಶಿಲಾಮಯ ಆಲಯದಲ್ಲಿ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ, ಅನ್ನ ಸಂತರ್ಪಣೆ, ನೇಮೋತ್ಸವ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ನವೀನ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಬೈಲೂರು, ಉಪಾಧ್ಯಕ್ಷ ಸದಾನಂದ ಶೆಟ್ಟಿ, ಆರ್ಥಿಕ ಸಮಿತಿಯ ರಮೇಶ್ ಶೆಟ್ಟಿ ಕಳತ್ತೂರು, ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಆರುಣ್ ಶೆಟ್ಟಿಗಾರ್ ಇದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.