



ಬೆಂಗಳೂರು: ಪ್ರೌಢಶಾಲೆಗಳ ಕೊಠಡಿಗಳಲ್ಲಿ ಪ್ರತಿ ವಿದ್ಯಾರ್ಥಿಗೆ ಕೊಠಡಿಗಳಲ್ಲಿ ಒಂದು ಚದರ ಮೀಟರ್ ಸ್ಥಳ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.
9 ನೇ ಮತ್ತು 10ನೇ ತರಗತಿ ತೆರೆಯ ಬಯಸುವ ಸಂಸ್ಥೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ಆದೇಶಿಸಿದೆ.
ಕೆಲ ಖಾಸಗಿ ಶಾಲೆಗಳು ಒಂದು ಡೆಸ್ಕ್ ಅಥವಾ ಬೆಂಚ್‌ನಲ್ಲಿ ಮೂವರು ವಿದ್ಯಾರ್ಥಿಗಳನ್ನು ಕೂರಿಸುತ್ತಿದ್ದಾರೆ. ಇದರಿಂದ ಮಕ್ಕಳು ಪಾಠದ ಕಡೆ ಗಮನ ಕೇಂದ್ರೀಕರಿಸಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವೊಮ್ಮೆ ಇಂತಹ ಸ್ಥಿತಿ ಮಕ್ಕಳ ಮಧ್ಯೆ ಜಗಳಗಳಿಗೆ ದಾರಿ ಮಾಡಿಕೊಟ್ಟಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಹಾಗಾಗಿ, ಸುತ್ತೋಲೆ ಹೊರಡಿಸಲಾಗಿದೆ ಎಂದು ಇಲಾಖೆ ಮೂಲಗಳು ಹೇಳಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.