



ಬೆಂಗಳೂರು: ದುಬಾರಿಯಾಗಿದ್ದ ಟೊಮ್ಯಾಟೋ ಮತ್ತೇ ಇಳಿಕೆಯಾಗಿರುವ ಹಿನ್ನೆಲೆ ಜನರು ಕೊಂಚ ನಿಟ್ಟುಸಿರು ಬಿಡುತ್ತಿರುವಾಗಲೇ ಮಾರ್ಕೆಟ್ನಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆ ದುಬಾರಿಯಾಗುವ ಮೂಲಕ ಬೆಲೆ ಏರಿಕೆ ಬಿಸಿ ತಟ್ಟಿದೆ.
ಬೆಂಗಳೂರಿನ ಕೆ.ಆರ್ ಮಾರ್ಕೆಟ್ನಲ್ಲಿ ವಾರದ ಹಿಂದೆ 25 ರೂ. ಇದ್ದ ಕೆಜಿ ಈರುಳ್ಳಿ, ಈಗ 30 ರಿಂದ 40 ರೂ. ಆಗಿದೆ. ಇನ್ನು 80 ರಿಂದ 100 ರೂಪಾಯಿ ಇದ್ದ ಬೆಳ್ಳುಳ್ಳಿ, 200 ರೂ.ಗೆ ಏರಿಕೆಯಾಗಿದ್ದು, ಶ್ರಾವಣ ಮಾಸದ ಆರಂಭದಲ್ಲಿ ಗ್ರಾಹಕರನ್ನ ಕಂಗಾಲಾಗಿಸಿದೆ. ಬೆಲೆ ಏರಿಕೆಗೆ ಬೇಸರ ವ್ಯಕ್ತಪಡಿಸಿದ ಮಹಿಳೆಯರು, ತರಕಾರಿ ಬೆಲೆಗಳು ಕಡಿಮೆ ಇದ್ರೆ ಜನರಿಗೆ ಅನುಕೂಲ.. ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಳ್ಳಲಿ ಅಂತ ಮನವಿ ಮಾಡ್ತಿದ್ದಾರೆ.
ಇನ್ನು ಮುಂಗಾರು ಕೈಕೊಟ್ಟಿದ್ರಿಂದ ಚಿತ್ರದುರ್ಗ, ದಾವಣಗೆರೆ ಸೇರಿ ಇತರೆ ಕಡೆಯಿಂದ ಈರುಳ್ಳಿ ಲಭ್ಯವಾಗುತ್ತಿಲ್ಲ. ಸದ್ಯ ರಾಜ್ಯದಲ್ಲಿ ಸುಮಾರು 4,000 ಹೆಕ್ಟೇರ್‌ನಲ್ಲಿ ಈರುಳ್ಳಿ ಬೆಳೆ ಕೊರತೆ ಇದೆ. ಮಳೆ ವಿಳಂಬ ಆಗಿರೋದ್ರಿಂದ ಈರುಳ್ಳಿ ಕೊಯ್ಲು 6 ರಿಂದ 8 ವಾರಗಳ ಕಾಲ ವಿಳಂಬ ಆಗ್ತಿದೆ. ಮಹಾರಾಷ್ಟ್ರದ ನಾಸಿಕ್ನಲ್ಲಿಯೂ ಇದೇ ಸಮಸ್ಯೆ ಇದೆ.. ಹೀಗಾಗಿ ಈರುಳ್ಳಿ ಕೊರತೆಯಿದ್ದು, ಈರುಳ್ಳಿಗೆ ದಿನ ದಿನಕ್ಕೂ ಡಿಮ್ಯಾಂಡ್ ಹೆಚ್ಚಾಗ್ತಿದೆ. ಮುಂದಿನ ದಿನದಲ್ಲಿ ಈರುಳ್ಳಿ ಕೆಜಿಗೆ 50 ರಿಂದ 60 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದ್ಯಂತೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.