



ಮುಂಬೈ: ಆಗಸ್ಟ್ ತಿಂಗಳ ಕೊನೆಯಲ್ಲಿ ದೇಶದ ರಿಟೇಲ್ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಹೆಚ್ಚಳ ಶುರುವಾಗಲಿದ್ದು, ಬೆಲೆಯು ಕೆ.ಜಿ.ಗೆ ₹60 ರಿಂದ ₹70 ರವರೆಗೆ ಏರಿಕೆ ಕಾಣಲಿದೆ ಎಂದು ಕ್ರಿಸಿಲ್ ಸಂಸ್ಥೆಯ ಅಧ್ಯಯನ ವರದಿಯೊಂದು ಹೇಳಿದೆ. ಪೂರೈಕೆಯ ಕೊರತೆಯು ಬೆಲೆ ಏರಿಕೆಗೆ ಕಾರಣವಾಗಲಿದೆ ಎಂದು ಅದು ಹೇಳಿದೆ.
ಆದರೆ, ಈರುಳ್ಳಿ ಬೆಲೆಯು 2020ರಲ್ಲಿ ಕಂಡಿದ್ದ ಗರಿಷ್ಠ ಮಟ್ಟಕ್ಕಿಂತ ಕಡಿಮೆ ಇರಲಿದೆ ಎಂದು ಅಂದಾಜು ಮಾಡಿದೆ.
‘ಈರುಳ್ಳಿಯ ಪೂರೈಕೆ ಮತ್ತು ಬೇಡಿಕೆಯಲ್ಲಿನ ಅಸಮತೋಲನವು, ಆಗಸ್ಟ್ ತಿಂಗಳ ಕೊನೆಯ ವೇಳೆಗೆ ಬೆಲೆ ಏರಿಕೆಯ ರೂಪದಲ್ಲಿ ಕಾಣಿಸಿಕೊಳ್ಳಲಿದೆ. ನಾವು ತಳಮಟ್ಟದಲ್ಲಿ ನಡೆಸಿದ ಮಾತುಕತೆಗಳ ಪ್ರಕಾರ ರಿಟೇಲ್ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ ಆರಂಭದಿಂದ ಬೆಲೆಯು ಗಮನಾರ್ಹವಾಗಿ ಹೆಚ್ಚಳ ಆಗಲಿದೆ. ಬೆಲೆಯು ₹70ರವರೆಗೂ ತಲುಪಬಹುದು’ ಎಂದು ಕ್ರಿಸಿಲ್ ಮಾರ್ಕೆಟ್ ಇಂಟೆಲಿಜೆನ್ಸ್ ಆ್ಯಂಡ್ ಅನಾಲಿಟಿಕ್ಸ್ ಸಿದ್ಧಪಡಿಸಿರುವ ವರದಿಯು ಹೇಳಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.