logo
WhatsApp Image 2026-04-02 at 14.46.04.jpeg
hindalco everlast.jpeg

ಆನ್ ಲೈನ್ ತರಬೇತಿ: ಆ್ಯಪ್ ಗೆ ಚಾಲನೆ ಕೊಟ್ಟ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಟ್ರೆಂಡಿಂಗ್
share whatsappshare facebookshare telegram
25 Sept 2023
post image

ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮೂಲಕ ಆನ್ ಲೈನ್ ತರಬೇತಿ ನೀಡುವ ಸಲುವಾಗಿ ಮೊಬೈಲ್ ಆ್ಯಪ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಪ್ರತಿದಿನ ಸಂಜೆ 5.30 ರಿಂದ 7 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ. ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ಏಕಕಾಲದಲ್ಲಿ ತರಬೇತಿ ನಡೆಯಲಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.