



ರಾಜ್ಯ ಸರ್ಕಾರವು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಯ ಸಮಯವನ್ನು ವಿಸ್ತರಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಗಳಲ್ಲಿ ಜನಸಂದಣೆ ಹೆಚ್ಚಿರುವ ಕಾರಣ ಸಾರ್ವಜನಿಕರ ಹಿತದೃಷ್ಟಿಯಿಂದ ಕಚೇರಿಯ ಸಮಯವನ್ನು ವಿಸ್ತರಿಸಲಾಗಿದೆ.
ಇನ್ನು ಮುಂದೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯವರೆಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಗಳೂ ತೆರೆದಿರುತ್ತವೆ ಎಂದು ನೋಂದಣೆ ಉಪ ಮಹಾ ಪರಿವೀಕ್ಷಕರು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಉಪ ನೋಂದಣಿ ಕಚೇರಿ ಕರ್ತವ್ಯದ ಸಮಯ ಪರಿಷ್ಕರಣೆ ಮಾಡಲಾಗಿದ್ದು, ಈ ಸಂಬಂಧ ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.