



ಕಾರ್ಕಳ: ಕೆಲವು ದಿನಗಳಿಂದ ಸೈಲೆಂಟ್ ಅಗಿದ್ದ ಗೋಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ಹೆಬ್ರಿ ಬ್ಯಾಣ ಪರಿಸರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಹೆಬ್ರಿ ಇನ್ಸ್ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದ ತಂಡ ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಬೆನ್ನಟ್ಟಿ 14 ಗೋವುಗಳ ರಕ್ಷಣಾ ಕಾರ್ಯದಲ್ಲಿ ಯಶಸ್ವಿಯಾಗಿದೆ.
ಖಚಿತ ಮಾಹಿತಿಯೊಂದಿಗೆ ಪೊಲೀಸರು ಬೆನ್ನಟ್ಟಿದ ಸಂದರ್ಭದಲ್ಲಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಗೋಕಳ್ಳರ ವಾಹನ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು, ಗೋಕಳ್ಳರು ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಗೋವುಗಳನ್ನು ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಕಟ್ಟಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.