logo
WhatsApp Image 2026-04-02 at 14.46.04.jpeg
hindalco everlast.jpeg

ಬೈಕ್ ಟ್ಯಾಕ್ಸಿಗೆ ವಿರೋಧ: ಆಟೋ ಚಾಲಕರ‌ ಮುಷ್ಕರ ಆರಂಭ

ಟ್ರೆಂಡಿಂಗ್
share whatsappshare facebookshare telegram
20 Mar 2023
post image

ಬೆಂಗಳೂರು: ನಗರದಲ್ಲಿ ಅಕ್ರಮ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿ ನಿಷೇಧಿಸುವಂತೆ ಪಟ್ಟು ಹಿಡಿದಿರುವ ಆಟೋ ಚಾಲಕರು ಭಾನುವಾರ ಮಧ್ಯರಾತ್ರಿಯಿಂದ ಮುಷ್ಕರ ಆರಂಭಿಸಿದ್ದಾರೆ.

ಈ‌ ಮುಷ್ಕರ ಸೋಮವಾರ ಮಧ್ಯರಾತ್ರಿಯವರೆಗೆ ನಡೆಯಲಿದೆ ಎಂದು‌ ಮುಷ್ಕರನಿರತ ಆಟೋ ಸಂಘಟನೆಗಳು ಹೇಳಿವೆ.

21 ಆಟೋ ಸಂಘಟನೆಗಳ ಸುಮಾರು 2.10 ಲಕ್ಷಕ್ಕೂ ಹೆಚ್ಚು ಆಟೋಗಳು ಬಂದ್‌ಗೆ ಬೆಂಬಲ ನೀಡಿವೆ. ಆಟೋ ಸೇವೆ ಬಂದ್‌ನಿಂದಾಗಿ ಪ್ರಯಾಣಿಕರು ನಗರದಲ್ಲಿ ಸಂಚರಿಸಲು ಬಿಎಂಟಿಸಿ ಬಸ್‌, ಮೆಟ್ರೋ, ಖಾಸಗಿ ವಾಹನ, ಟ್ಯಾಕ್ಸಿ ಹಾಗೂ ಓಲಾ, ಉಬರ್ ವಾಹನಗಳನ್ನು ಅವಲಂಬಿಸಬೇಕಾಗಿದೆ.

ಇಂದು ಬೆಳಗ್ಗೆ 11 ಗಂಟೆ ನಂತರ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಷ್ಕರನಿರತ ಆಟೋ‌ ಚಾಲಕರು ನಿರ್ಧರಿಸಿದ್ದಾರೆ. ಸೋಮವಾರ ಬೆಳಗ್ಗೆ 11ಕ್ಕೆ ಸಂಗೊಳ್ಳಿ ಕ್ರಾಂತಿವೀರ ರಾಯಣ್ಣ ರೈಲ್ವೆ ನಿಲ್ದಾಣದ ಬಳಿಯಿಂದ ಚಾಲಕರು ಪಾದಯಾತ್ರೆ ಮೂಲಕ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವುದಾಗಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮುಷ್ಕರ ಹಿನ್ನೆಲೆಯಲ್ಲಿ ಬಿಎಂಟಿಸಿ ಪ್ರಯಾಣಿಕರಿಗೆ ಹೆಚ್ಚಿನ ಬಸ್ ಕಾರ್ಯಾಚರಣೆಗೆ ಮುಂದಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.