



ಕೋಟ: ಪಂಚವರ್ಣ ಯುವಕ ಮಂಡಲ (ರಿ) ಕೋಟ ಇದರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ ,ಗಿಳಿಯಾರು ಯುವಕ ಮಂಡಲ,ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಗೀತಾನಂದ ಫೌಂಡೇಶನ್ ಮಣೂರು ಇವರುಗಳ ಸಹಯೋಗದಲ್ಲಿ 11ನೇ ಆವೃತಿಯ ತಿಂಗಳ ಸರಣಿ ಕಾರ್ಯಕ್ರಮ ಸಾಧಕ ಕೃಷಿಕನ ಗೌರವಿಸುವ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು ಈ ಸರಣಿ ಕಾರ್ಯಕ್ರಮದಲ್ಲಿ ಕೋಟ ಮಣೂರು ಪರಿಸರದ ಹಿರಿಯ ಸಾಧಕ ಕೃಷಿಕ ಶಿವ ಪೂಜಾರಿ ಪತ್ನಿ ಸಮೇತರಾಗಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಭಾಸ್ಕರ್ ಶೆಟ್ಟಿ ಮಸೂರ,ಯುವ ಕೃಷಿಕ ಭೋಜ ಪೂಜಾರಿ,ರೈತಧ್ವನಿ ಸಂಘ ಕೋಟ ಅಧ್ಯಕ್ಷ ಜಯರಾಮ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ,ಉಪಾಧ್ಯಕ್ಷ ಮನೋಹರ ಪೂಜಾರಿ,ವಿಪ್ರ ಮಹಿಳಾ ಬಳಗದ ಸುಜಾತ ಬಾಯರಿ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ,ಕೋಟ ಕರ್ಣಾಟಕ ಬ್ಯಾಂಕ್ ನ ನಾಗೇಶ್ ಮಯ್ಯ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.